ಗೋಣಿಕೊಪ್ಪಲು, ಸೆ. 19: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ವೀರಾಜಪೇಟೆ ತಾಲೂಕು ಬಾಳೆಲೆ ಹೋಬಳಿಯ ನಿಟ್ಟೂರು ಗ್ರಾಮದ ಕಾರ್ಮಾಡುವಿನ ಸಮುದಾಯ ಭವನದಲ್ಲಿ ವೀರಾಜಪೇಟೆ ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಅಧ್ಯಕ್ಷತೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.
ಶಾಸಕ ಕೆ.ಜಿ. ಬೋಪಯ್ಯ ಶಿಬಿರ ಉದ್ಘಾಟಿಸಿ ಮಾತನಾಡಿ, ಪ್ರಧಾನಿಯವರ ಜನ್ಮ ದಿನದ ಅಂಗವಾಗಿ ನೇತ್ರ ತಪಾಸಣಾ ಶಿಬಿರ ನಡೆಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಶಿಬಿರದಲ್ಲಿ ಅವಶ್ಯಕತೆ ಇರುವವರಿಗೆ ಕನ್ನಡಕ ವಿತರಿಸಲಾಗುವುದು. ವಾರದ 7 ದಿನಗಳು ವಿವಿಧ ಕಾರ್ಯಕ್ರಮಗಳು ಪಕ್ಷದ ವತಿಯಿಂದ ನಡೆಯಲಿದೆ ಎಂದರು. ನೆಲ್ಲೀರ ಚಲನ್ ಕುಮಾರ್ ಮಾತನಾಡಿ ಕ್ಷೇತ್ರದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಆರೋಗ್ಯ ತಪಾಸಣೆ, ನೇತ್ರ ಚಿಕಿತ್ಸಾ ಶಿಬಿರ ಸೇರಿದಂತೆ ರಕ್ತದಾನ ಶಿಬಿರವನ್ನು ಕೂಡ ನಡೆಸಲು ಉದ್ದೇಶಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಿಟ್ಟೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾದ ಕಾಟಿಮಾಡ ಶರೀನ್, ಅಳಮೇಂಗಡ ಸುರೇಶ್ ಸುಬ್ಬಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಂಞಂಗಡ ಅರುಣ್ ಭೀಮಯ್ಯ, ಜಿಲ್ಲಾ ಖಜಾಂಚಿ ಚೆಪ್ಪುಡೀರ ಮಾಚಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಸಿ.ಕೆ.ಬೋಪಣ್ಣ, ಮೂಕೊಂಡ ಶಶಿಸುಬ್ರಮಣಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಅಪ್ಪಂಡೇರಂಡÀ ಭವ್ಯ, ಬಿಜೆಪಿ ಅಕ್ರಮ ಸಕ್ರಮ ತಾಲೂಕು ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ತಾಲೂಕು ಯುವ ಮೋರ್ಚ ಅಧ್ಯಕ್ಷ ಸೋಮೆಂಗಡ ಕವನ್ ಕಾರ್ಯಪ್ಪ ಮುಂತಾದವರು ಉಪಸ್ಥಿತರಿದ್ದರು. ನೂರಾರು ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದರು.