ಸೋಮವಾರಪೇಟೆ, ಸೆ. 19: ಪಟ್ಟಣದಲ್ಲಿ ವಾಹನ ಸಂಚಾಯ ನಿಯಮ ಮೀರುವ ಮಂದಿಗೆ ಪೊಲೀಸರು ಆಗಾಗ್ಗೆ ದಂಡ ವಿಧಿಸುತ್ತಿದ್ದಾರೆ.

ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ಬೈಕ್‍ಗಳ ನಿಲುಗಡೆ, ಹೆಲ್ಮೆಟ್ ರಹಿತವಾಗಿ ಬೈಕ್ ಚಾಲಿಸಿಕೊಂಡು ಬರುವ ಸವಾರರಿಗೆ ಸ್ಥಳದಲ್ಲೇ ದಂಡ ವಿಧಿಸಿ ಎಚ್ಚರಿಕೆ ನೀಡಲಾಗುತ್ತಿದೆ.

ಖಾಸಗಿ ಬಸ್ ನಿಲ್ದಾಣದ ಒಂದು ಬದಿಯಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದ್ದು, ಹಲವಷ್ಟು ಮಂದಿ ಹೆಲ್ಮೆಟ್ ಧರಿಸದೇ ಬೈಕ್ ಚಾಲಿಸಿಕೊಂಡು ಪಟ್ಟಣಕ್ಕೆ ಬರುತ್ತಿದ್ದಾರೆ. ಇಂತಹವರಿಗೆ ಪೊಲೀಸರು ಸ್ಥಳದಲ್ಲೇ 100 ರೂಪಾಯಿ ದಂಡ ವಿಧಿಸಿ, ಎಚ್ಚರಿಕೆ ನೀಡುತ್ತಿದ್ದಾರೆ.