ಕುಶಾಲನಗರ, ಸೆ 19: ಕುಶಾಲನಗರ ಸಂತೆ ಮಾರುಕಟ್ಟೆಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಆವರಣಕ್ಕೆ ಸ್ಥಳಾಂತರಗೊಂಡ ಮಾರುಕಟ್ಟೆಯ ಸಮಸ್ಯೆಗಳ ಬಗ್ಗೆ ವ್ಯಾಪಾರಿಗಳಿಂದ ಮಾಹಿತಿ ಪಡೆದರು. ವಾಹನಗಳ ನಿಲುಗಡೆಗೆ ಪ್ರತ್ಯೇಕ ಸ್ಥಳ ನಿಗದಿ ಮಾಡುವುದು, ಮಾರಾಟ ವಸ್ತುಗಳ ಖರೀದಿ ಸಂದರ್ಭ ಗ್ರಾಹಕರಿಗೆ ಯಾವುದೇ ಸಂದರ್ಭ ಅನಾನುಕೂಲ ಉಂಟಾಗದಂತೆ ಎಚ್ಚರವಹಿಸುವಂತೆ ಆರ್‍ಎಂಸಿ ಕಾರ್ಯದರ್ಶಿ ಶ್ರೀಧರ್ ಅವರಿಗೆ ಸೂಚನೆ ನೀಡಿದರು.

ಈ ಸಂದರ್ಭ ಸಂತೆ ಮಾರುಕಟ್ಟೆ ವ್ಯಾಪಾರಿಗಳ ಸಂಘದ ಅಧ್ಯಕ್ಷÀ ಮಹೇಶ್ ಮತ್ತಿತರರು ಶಾಸಕರೊಂದಿಗೆ ವರ್ತಕರಿಗೆ ಮತ್ತು ಗ್ರಾಹಕರಿಗೆ ಎಲ್ಲಾ ಮೂಲಭೂತ ಸೌಲಭ್ಯ ಒದಗಿಸುವಂತೆ ಕೋರಿದರಲ್ಲದೆ ನೂತನ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಜಿಪಂ ಜಿಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಆರ್.ಮಂಜುಳಾ, ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವಿಜು ಚಂಗಪ್ಪ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಪ್ರಮುಖರಾದ ಕೆ.ಜಿ.ಮನು, ಎಂ.ಡಿ.ಕೃಷ್ಣಪ್ಪ, ವಿ.ಡಿ.ಪುಂಡರೀಕಾಕ್ಷ, ಪಪಂ ಸದಸ್ಯರಾದ ರೂಪ ಉಮಾಶಂಕರ್, ಮತ್ತಿತರರು ಇದ್ದರು.