ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಆದೇಶ ಮಡಿಕೇರಿ, ಸೆ. 19 : ಕೇಂದ್ರÀ ಸರ್ಕಾರದ ಗೃಹ ಮಂತ್ರಾಲಯದ ಆ. 29ರ ಮಾರ್ಗಸೂಚಿಯಂತೆ ಕಂಟೈನ್‍ಮೆಂಟ್ ವಲಯ ಹೊರತುಪಡಿಸಿ 9 ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತಾ. 21 ರಿಂದ ಶಾಲಾ-ಕಾಲೇಜುಗಳನ್ನು ತೆರೆದು ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ಭೇಟಿ ನೀಡಲು ಅನುಮತಿ ನೀಡಲಾಗಿತ್ತು. ಆದರೆ ಈ ಸಂಬಂಧ ವಿವರವಾಗಿ ಪರಿಶೀಲಿಸಿದ ನಂತರ ರಾಜ್ಯದಲ್ಲಿ ಕೊರೊನಾ ಹಬ್ಬುತ್ತಿರುವ ಪ್ರಮಾಣ ಕಡಿಮೆಯಾಗದ ಹಿನ್ನೆಲೆಯಲ್ಲಿ ತಾ. 21ರಿಂದ ಈ ತಿಂಗಳ ಅಂತ್ಯದವರೆಗೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಲು ವಿದ್ಯಾರ್ಥಿಗಳಿಗೆ ಅನುಮತಿಯನ್ನು ನೀಡದಿರಲು ನಿರ್ಧರಿಸಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನವನ್ನು ತಿಳಿಸಲಾಗುವುದು ಎಂದು ಶಿಕ್ಷಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಆದೇಶ ಹೊರಡಿಸಿದ್ದಾರೆ.