ಮಡಿಕೇರಿ, ಸೆ. 19: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿದ್ದು ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ತಾ. 21 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪೊನ್ನಂಪೇಟೆ, ವೀರಾಜಪೇಟೆ, ಶ್ರೀಮಂಗಲ, ಸಿದ್ದಾಪುರ ಹಾಗೂ ಮೂರ್ನಾಡು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳೆಲೆ, ಕಾನೂರು, ಬಿರುನಾಣಿ, ಕುಟ,್ಟ ವೀರಾಜಪೇಟೆ, ಬಿ.ಶೆಟ್ಟಿಗೇರಿ, ಬೇತ್ರೀ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಅಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ್ ಕೋರಿದ್ದಾರೆ.