ಮಡಿಕೇರಿ, ಸೆ. 20: ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ವಿಪರೀತ ಮಳೆ ಹಾಗೂ ಭಾರೀ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ತಾ. 21ರಂದು ನಿಗದಿಪಡಿಸಿದ್ದ ಎಲ್ಲಾ ಸ್ನಾತಕ /ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರಿಷ್ಕøತ ದಿನಾಂಕವನ್ನು ನಿಗದಿಪಡಿಸಿ ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು. ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮಂಗಳೂರು ವಿ.ವಿ. ಪ್ರಕಟಣೆ ತಿಳಿಸಿದೆ.