ಕೂಡಿಗೆ, ಸೆ. 21: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿಗಳನ್ನು ಕಳೆದ ಮಾಸಿಕ ಸಭೆಗಳಲ್ಲಿ ತೆಗೆದುಕೊಂಡ ಕ್ರಿಯಾ ಯೋಜನೆ ಅನುಗುಣವಾಗಿ ಪೂರ್ಣಗೊಳಿಸುವುದರ ಮೂಲಕ ಗ್ರಾಮದ ಅಭಿವೃದ್ಧಿಗೆ ಅಧಿಕಾರಿಗಳು ಸಹಕಾರಿಗಳಾಗಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮಸಭೆ ಮತ್ತು ಮಾಸಿಕ ಸಭೆಯಲ್ಲಿ ಅನೇಕ ಪ್ರಮುಖ ಕಾಮಗಾರಿಗಳನ್ನು ಕೈಗೊಳ್ಳಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಆಯಾ ವಾರ್ಡ್‍ನ ಸದಸ್ಯರ ಮತ್ತು ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಅಲ್ಲಿನ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಗ್ರಾಮದ ಅಭಿವೃದ್ಧಿ ಮತ್ತು ಇತರ ಉಪ ರಸ್ತೆಗಳನ್ನು ಅಭಿವೃದ್ಧಿಪಡಿಸುವುದರಿಂದ ಗ್ರಾಮದ ರೈತರಿಗೆ ಮತ್ತು ಸಾರ್ವಜನಿಕರಿಗೆ ಸದುಪಯೋಗವಾಗಲಿದೆ. ಗ್ರಾಮ ಸಭೆಯಲ್ಲಿ ಕೈಗೊಂಡ ಕ್ರಿಯಾ ಯೋಜನೆಗಳನ್ನು ಅನುಷ್ಠಾನಗೊಳಿಸಿ ಕಾಮಗಾರಿಗಳನ್ನು ನಡೆಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.