ಮಡಿಕೇರಿ, ಸೆ. 21: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಸಂಗೀತ ನೃತ್ಯದಲ್ಲಿ ಪ್ರಕಟವಾಗಿರುವ ಕನ್ನಡದ ಉತ್ತಮ ಪುಸ್ತಕಕ್ಕೆ ಬಹುಮಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾ ಕೀರ್ತನ, ಗಮಕ ಈ ಕಲಾಪ್ರಕಾರಗಳಲ್ಲಿ 2020-21 ನೇ ಸಾಲಿಗೆ 2019 ಜನವರಿಯಿಂದ 2019ರ ಡಿಸೆಂಬರ್ ಒಳಗೆ ಪ್ರಕಟಿಸಿರುವ ಪುಸ್ತಕಗಳನ್ನು ಮಾತ್ರ ಬಹುಮಾನಕ್ಕೆ ಸಲ್ಲಿಸಬಹುದು.

ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ದಪಡಿಸಿರಬಾರದು. ಸಂಪಾದಿತ ಕೃತಿಯಾಗಿರಬಾರದು. ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣಾವೃತ್ತಿಯಾಗಿರಬೇಕು. ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ತಾ.30ರೊಳಗೆ ಅರ್ಜಿಯೊಂದಿಗೆ ಪುಸ್ತಕದ 4 ಪ್ರತಿಗಳನ್ನು ಕಳುಹಿಸುವುದು. ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಅಕಾಡೆಮಿಯಿಂದ ಪಡೆಯಬಹುದು. ಹಾಗೂ ಆಯಾಯ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಯಲ್ಲಿ ಪಡೆಯಬಹುದು. ಹಾಗೂ ಅಕಾಡೆಮಿ ಅಂರ್ತಜಾಲತಾಣ hಣಣಠಿs://ಞಚಿಡಿಟಿಚಿಣಚಿಞಚಿsಚಿಟಿgeeಣಚಿಟಿಡಿiಣಥಿಚಿಚಿಛಿಚಿಜemಥಿ.ಛಿom ಮೂಲಕ ಪಡೆಯಬಹುದು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ.ಅಂಗಡಿ ಅವರು ತಿಳಿಸಿದ್ದಾರೆ