ಮಡಿಕೇರಿ, ಸೆ. 21: ಕೊಡಗಿನಲ್ಲಿ ಆನೆ - ಮಾನವ ಸಂಘರ್ಷ ನಿರಂತರವಾಗಿ ನಡೆಯು ತ್ತಿದ್ದು, ಇದಕ್ಕೆ ಸರ್ಕಾರ ಗುರುತಿಸಿರುವ ಕಾರಣ ವೇನು ಎಂದು ವಿಧಾನಪರಿಷತ್ ಕಲಾಪದಲ್ಲಿ ಶಾಸಕಿ ವೀಣಾ ಅಚ್ಚಯ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅರಣ್ಯ ಸಚಿವ ಆನಂದ್‍ಸಿಂಗ್, ಆನೆ ವಲಯ ಪ್ರದೇಶಗಳಲ್ಲಿ ಅತಿಯಾದ ವಾಹನ ಸಂಚಾರ ದಟ್ಟಣೆ, ರಸ್ತೆಯಲ್ಲಿನ ಚಲನವಲನಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ತಲೆ ಎತ್ತುತ್ತಿರುವ ಪ್ರವಾಸಿ ಚಟುವಟಿಕೆಗಳು ಕಾರಣವೆಂದು ಉತ್ತರಿಸಿದ್ದಾರೆ.ಸರ್ಕಾರ ಈ ಸಮಸ್ಯೆಯನ್ನು ಪರಿಹರಿಸಲು ಕೈಗೊಂಡಿರುವ ಕ್ರಮಗಳೇನು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಾಗಿ 51.37 ಕಿ.ಮೀ. ಸೋಲಾರ್ ತಂತಿ ಬೇಲಿ ನಿರ್ಮಾಣ ಮಾಡಲಾಗಿದೆ, ಅರಣ್ಯ ಅಂಚಿನ ಗ್ರಾಮಗಳಲ್ಲಿ ಆನೆಗಳು ಕಾಡಿನಿಂದ ನಾಡಿಗೆ ಬಾರದಂತೆ 45.41 ಕಿ.ಮೀ. ಆನೆ ತಡೆ ಕಂದಕ ನಿರ್ಮಾಣ ಕಾಮಗಾರಿ ಕೈಗೊಳ್ಳ ಲಾಗಿದೆ, ಅರಣ್ಯ ದಂಚಿನ ಗ್ರಾಮಗಳಲ್ಲಿ ರೈತರಿಗೆ ಶೇಕಡ 50:50ರ ರಿಯಾಯಿತಿಯಲ್ಲಿ ಸೋಲಾರ್ ತಂತಿಬೇಲಿ ನಿರ್ಮಾಣವನ್ನು ಕೈಗೊಳ್ಳಲು ಅರಣ್ಯ ಇಲಾಖೆಯಿಂದ ಶೇಕಡ 50 ರಷ್ಟು ಸಹಾಯಧನ ನೀಡಲಾಗುತ್ತಿದ್ದು, 2020-21ನೇ ಸಾಲಿನಲ್ಲಿ 4.783 ಕೀ.ಮೀ. ಕಾಮಗಾರಿ ಪ್ರಗತಿಯಲ್ಲಿದೆ ಹಾಗೂ ಕಾಡಾನೆ ಹಾವಳಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು 13.42 ಕಿ.ಮೀ. ರೈಲ್ವೆ ಹಳಿಗಳ ಬ್ಯಾರಿಕೇಡ್ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಪ್ರಸ್ತುತ 9.516 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಆನಂದ್ ಸಿಂಗ್ ಉತ್ತರಿಸಿದರು
ಕೊಡಗು ಜಿಲ್ಲೆಯ ಅರಣ್ಯ ವೃತ್ತದ ವ್ಯಾಪ್ತಿಯ ವಲಯಗಳಲ್ಲಿ ಕಾಡಾನೆ ಹಾವಳಿಯ ತುರ್ತು ನಿರ್ವಹಣೆಗಾಗಿ 22 ರ್ಯಾಪಿಡ್ ರೆಸ್ಪಾನ್ಸ್ ತಂಡ ರಚಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ. ಆಯ್ದ ವಲಯಗಳಲ್ಲಿ ಕಾಡಾನೆ ಹಿಮ್ಮೆಟ್ಟಿಸುವ ತಂಡಗಳ ರಚನೆ ಮಾಡಲಾಗಿದೆ. ಕಾಡಾನೆ ಇರುವಿಕೆ, ಅವುಗಳ ಚಲನವಲನಗಳ ಬಗ್ಗೆ ಸಾರ್ವಜನಿಕರಿಗೆ ರೈತರಿಗೆ ಮಾಹಿತಿ ನೀಡುವ ಎಸ್‍ಎಂಎಸ್ ಅಲರ್ಟ್ ವ್ಯವಸ್ಥೆ ಕಾರ್ಯ ನಿರ್ವಹಿಸುತ್ತಿದೆ.
ವನ್ಯಪ್ರಾಣಿಗಳ ದಾಳಿಯಿಂದ ಭಾದಿತ ಗ್ರಾಮಗಳ ಜನರೊಂದಿಗೆ ಸಂಪರ್ಕ ಸಭೆ ನಡೆಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ 2014 ರಿಂದ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ 13 ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರ ಮಾಡಲಾಗಿದೆ. ಜಿಲ್ಲೆಯಲ್ಲಿ 9 ಆನೆಗಳಿಗೆ ರೇಡಿಯೋ ಕಾಲರ್‍ಗಳನ್ನು ಅಳವಡಿಸಿ, ಅವುಗಳ ಚಲನವಲನಗಳ ಬಗ್ಗೆ ನಿಗಾ ವಹಿಸಲಾಗುತ್ತಿದೆ.
(ಮೊದಲ ಪುಟದಿಂದ) ಕೊಡಗು ಜಿಲ್ಲೆಯ ನಾಗರಹೊಳೆ ವ್ಯಾಪ್ತಿಯಲ್ಲಿ ರಕ್ಷಣಾ ಕೆಲಸಗಳಿಗಾಗಿ ಎಸ್‍ಟಿಪಿಎಫ್ ತಂಡ ನೇಮಕ ಮಾಡಿ ರಕ್ಷಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. 2016, ಆಗಸ್ಟ್ 7 ರ ರನ್ವಯ ಕೊಡಗು ಜಿಲ್ಲೆಯಲ್ಲಿ
ಮಾನವ-ವನ್ಯಜೀವಿ ಸಂಘರ್ಷ ದಿಂದ ಭಾದಿತರಾದ ವ್ಯಕ್ತಿಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಬೆಂಬಲ ನೀಡುವುದರ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಕೊಡಗು ಮಾನವ ವನ್ಯಪ್ರಾಣಿ ಸಂಘರ್ಷ-ಉಪಶಮನ ಪ್ರತಿಷ್ಠಾನವನ್ನು ವೃತ್ತ ಮಟ್ಟದಲ್ಲಿ ಸ್ಥಾಪಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ 2016-17ರಲ್ಲಿ 2831, 2017-18ರಲ್ಲಿ 1742, 2018-19ರಲ್ಲಿ 3915, 2019-20 ರಲ್ಲಿ 3703, 2020-21 ಆಗಸ್ಟ್-2020ರ ಅಂತ್ಯಕ್ಕೆ 1174 ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ದಾಖಲಾಗಿವೆ ಎಂದು ಆನಂದ್‍ಸಿಂಗ್ ಮಾಹಿತಿ ನೀಡಿದ್ದಾರೆ.
ಆರೋಗ್ಯ ಸಚಿವರ ಮಾಹಿತಿ
ಜಿಲ್ಲೆಯಲ್ಲಿನ ಡಯಾಲಿಸಿಸ್ ಕೇಂದ್ರಗಳ ಬಗ್ಗೆ ವೀಣಾ ಅಚ್ಚಯ್ಯ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು, ಕೊಡಗು ಜಿಲ್ಲೆಯಲ್ಲಿ 3 ಡಯಾಲಿಸಿಸ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲಾಸ್ಪತ್ರೆ, ವೀರಾಜಪೇಟೆ ಮತ್ತು ಸೋಮವಾರಪೇಟೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಕೊಡಗು ಜಿಲ್ಲಾಸ್ಪತ್ರೆಯಲ್ಲಿ 21, ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ 12 ಮತ್ತು ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ 9 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಕಳೆದ 3 ತಿಂಗಳಿನಲ್ಲಿ 99 ರೋಗಿಗಳು ಡಯಾಲಿಸಿಸ್ ಚಿಕಿತ್ಸೆ ಪಡೆದಿದ್ದಾರೆ ಎಂದು ಸಚಿವರು ತಿಳಿಸಿದರು.