ಕೂಡಿಗೆ, ಸೆ. 21: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮುಖಂಡರಾದ ಜಯಲಕ್ಷ್ಮಿ ನೆರವೇರಿಸಿದರು. ಮಕ್ಕಳ ಪೌಷ್ಟಿಕ ಆಹಾರದ ಬಗ್ಗೆ ತಾಯಿಯಂದಿರು ಹೆಚ್ಚಿನ ಗಮನ ಹರಿಸಬೇಕು ಎಂದರು. ಈ ಸಂದರ್ಭ 6 ತಿಂಗಳಿನಿಂದ ಎರಡು ವರ್ಷದವರೆಗಿನ ಮಕ್ಕಳ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಹಿರಿಯ ಆರೋಗ್ಯ ಸಹಾಯಕರಾದ ವೇದಾವತಿ, ಕಿರಿಯ ಆರೋಗ್ಯ ಸಹಾಯಕಿ ಸುಗುಣ ಸಂಜಯ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.