ಮಡಿಕೇರಿ, ಸೆ. 21: ಎಸ್.ಕೆ.ಎಸ್.ಎಸ್.ಎಫ್. ಜಿಸಿಸಿ ಕೊಡಗು ಸಮಿತಿಯ ಅಧೀನದಲ್ಲಿ ಈಗಾಗಲೇ ಯುಎಇ, ಕತಾರ್ ಸಮಿತಿಯನ್ನು ರಚಿಸಲಾಗಿದ್ದು, ಇದೀಗ ಬಹರೈನ್ ಕೇಂದ್ರೀಕರಿಸಿ ಕಾರ್ಯನಿರ್ವಹಿಸಲು ನೂತನ ಸಮಿತಿಯನ್ನು ರಚಿಸಲಾಗಿದೆ.

ಆನ್‍ಲೈನ್‍ನಲ್ಲಿ ನಡೆದ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮದಲ್ಲಿ ಜಿಸಿಸಿ ಉಪಾಧ್ಯಕ್ಷ ಜೈನುದ್ದೀನ್ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಜಿಸಿಸಿ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಗಫೂರ್ ವೀರಾಜಪೇಟೆ ಸಮಿತಿ ರಚನೆಯ ಮೇಲುಸ್ತುವಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೂಸ ಉಸ್ತಾದ್ ವೀರಾಜಪೇಟೆ ನೂತನ ಪದಾಧಿಕಾರಿಗಳ ಹೆಸರನ್ನು ಘೋಷಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಕೆ.ಎಸ್.ಎಸ್.ಎಫ್. ಜಿಸಿಸಿ ಕೊಡಗು ಅಧ್ಯಕ್ಷ ಹುಸೈನ್ ಫೈಝಿ ವಹಿಸಿದ್ದರು. ಎಸ್.ಕೆ.ಎಸ್.ಎಸ್.ಎಫ್. ಬಹರೈನ್ ಕೊಡಗು ನೂತನ ಸಮಿತಿಯ ಅಧ್ಯಕ್ಷರಾಗಿ ಇಬ್ರಾಹಿಂ ದಾರಿಮಿ, ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಕೆ.ಐ. ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಮಹಮ್ಮದ್ ಅಲಿ, ಉಪಾಧ್ಯಕ್ಷರುಗಳಾಗಿ ಮೊಹಮ್ಮದ್ ರಾಫಿ ಹಾಗೂ ರಶೀದ್, ಸಹ ಕಾರ್ಯದರ್ಶಿಗಳಾಗಿ ನೂರುದ್ದೀನ್ ಹಾಗೂ ಉಸ್ಮಾನ್ ಆಯ್ಕೆಯಾಗಿದ್ದಾರೆ.

ಎಸ್.ಕೆ.ಎಸ್.ಎಸ್.ಎಫ್. ಜಿಸಿಸಿ ಕೊಡಗು ಪ್ರಧಾನ ಕಾರ್ಯದರ್ಶಿ ಶಿಹಾಬ್ ಆಲುಂಗಲ್ ಸ್ವಾಗತಿಸಿ, ಯಾಹ್ಯಾ ಕೊಡ್ಲಿಪೇಟೆ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.