ಕೂಡಿಗೆ, ಸೆ. 21: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2019-20ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾ. 22 ರಂದು (ಇಂದು) ಕುಶಾಲನಗರ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅರುಣ ನೋಡಲ್ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಅಶೋಕ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳ, ತಾಲೂಕು ಪಂಚಾಯಿತಿ ಸದಸ್ಯೆ ಆರ್. ಪುಷ್ಪ ಭಾಗವಹಿಸಲಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ತಿಳಿಸಿದ್ದಾರೆ.