ಸುಂಟಿಕೊಪ್ಪ, ಸೆ. 21: ಇಲ್ಲಿನ ಡಾ:ಬಿ.ಆರ್.ಅಂಬೇಡ್ಕರ್ ಭವನದಲ್ಲಿ ರಾಜ್ಯ ಕಾಂಗ್ರೆಸ್ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಎಂಟು ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಐ.ಎನ್.ಟಿ.ಯು.ಸಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಡಾ.ಬಿ.ಆರ್.ಅಂಬೇಡ್ಕರ್ ಭಾವ ಚಿತ್ರಕ್ಕೆ ಜ್ಯೋತಿ ಬೆಳಗಿಸಿ ಪುಷ್ಪಾರ್ಚನೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಮತ್ತು ಅಭಿನಂದನಾ ಪತ್ರವನ್ನು ವಿತರಿಸಿದರು.
ಬಡ ಕಾರ್ಮಿಕರ ವಿದ್ಯಾರ್ಥಿಗಳನ್ನು ಗುರುತಿಸಿ ಉತ್ತೇಜಿಸುವ ದಿಶೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಉಲುಗುಲಿ ಮತ್ತು ಜನತಾ ಕಾಲೋನಿ ಮಕ್ಕಳಿಗೆ ವಾಲಿ ಬಾಲ್, ಪುಟ್ಬಾಲ್ ಮತ್ತು ನೆಟ್ ವಿತರಿಸಿದರು. ವೇದಿಕೆಯಲ್ಲಿ ರಾಜ್ಯ ಕಾರ್ಮಿಕ ಸಂಘದ ಕಾರ್ಯದರ್ಶಿ ಅಜ್ಜಳ್ಳಿ ರವಿ, ಕಾಂಗ್ರೆಸ್ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಅಧ್ಯಕ್ಷ ತ್ರಿನೇಶ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಪೆಮ್ಮಯ್ಯ, ಐ.ಎನ್.ಟಿ.ಯು.ಸಿ ಸಂಘಟನೆಯ ಜಿಲ್ಲಾಧ್ಯಕ್ಷ ಗೋವಿಂದರಾಜ್ ದಾಸ್, ಕುಶಾಲ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಶರೀಫ್ ಇಬ್ರಾಹಿಂ, ಎಂ.ಎ.ಉಸ್ಮಾನ್. ಅಂಬೇಡ್ಕರ್ ಸಂಘದ ಸದಸ್ಯರು ಶ್ರೀ ಶಕ್ತಿ ಸಂಘದ ಸದಸ್ಯರು ಅಂಗನವಾಡಿ ಕಾರ್ಯಕರ್ತರು ಪೋಷಕರು ಉಪಸ್ಥಿತರಿದ್ದರು.