ನಾಪೆÇೀಕ್ಲು, ಸೆ. 22: ಸಮೀಪದ ಚೆಯ್ಯಂಡಾಣೆಯ ಭಾರತೀಯ ಜನತಾ ಪಾರ್ಟಿಯ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪೊಕ್ಕುಳಂಡ್ರ ದನೋಜ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಬಾಚಮಂಡ ಲೋಕೇಶ್ ಆಯ್ಕೆಯಾದರು.

ಬಿಜೆಪಿ ತಾಲೂಕು ಅಧ್ಯಕ್ಷ ಕಾಂಗೀರ ಸತೀಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೋಡಿರ ಪ್ರಸನ್ನ ತಮ್ಮಯ್ಯ, ಡೀನ್ ಬೋಪಣ್ಣ, ಜಿಲ್ಲಾ ಸಮಿತಿ ಸದಸ್ಯ ಐತಿಚಂಡ ಭೀಮಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಉಷಾ ದೇವಮ್ಮ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಹೇಮಂತ್ ತೋರೆರ, ಹಿಂದುಳಿದ ವರ್ಗದ ಅಧ್ಯಕ್ಷ ಕೊಳೆಯಂಡ ಗಿರೀಶ್ ಮತ್ತಿತರರು ಹಾಜರಿದ್ದರು.

ಸುಂಟಿಕೊಪ್ಪ, ಸೆ. 22: ಐಗೂರು ಗ್ರಾಮದ ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರದ ಪ್ರಮುಖರಾಗಿ ಮಚ್ಚಂಡ ಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹ ಪ್ರಮುಖ್ ಆಗಿ ಟಿ.ಆರ್. ವಿಜಯ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಎ.ಯು. ರಮೇಶ್, ಎಸ್‍ಟಿ ಮೋರ್ಚಾ ಅಧ್ಯಕ್ಷರಾಗಿ ಉಮೇಶ್, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಸುಜಾತ ಬಾಲಕೃಷ್ಣ, ಕೃಷಿ ಮೋರ್ಚಾ ಅಧ್ಯಕ್ಷರಾಗಿ ಯಡವನಾಡು ಪ್ರಶಾಂತ್, ಹಿಂದುಳಿದ ಮೋರ್ಚಾ ಅಧ್ಯಕ್ಷರಾಗಿ ಜಿ.ಕೆ. ವಿನೋದ್, ಯುವ ಮೋರ್ಚಾ ಅಧ್ಯಕ್ಷರಾಗಿ ಬಿ.ಎಲ್. ಯತೀಶ್ ರೈ ಆಯ್ಕೆಯಾಗಿದ್ದಾರೆ.

ಈ ಸಂದರ್ಭ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸೋಮವಾರಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ತಾ.ಪಂ. ಸದಸ್ಯೆ ಸಬಿತಾ ಹಾಗೂ ಇತರರು ಹಾಜರಿದ್ದರು.

ಗುಡ್ಡೆಹೊಸೂರು, ಸೆ. 22: ಇಲ್ಲಿಗೆ ಸಮೀಪದ ನಂಜರಾಯಪಟ್ಟಣದ ಶಕ್ತಿ ಕೇಂದ್ರದ ಆಯ್ಕೆ ಸಭೆ ಇತ್ತೀಚೆಗೆ ಮಹಿಳಾ ಸಮಾಜದ ಕಟ್ಟಡದಲ್ಲಿ ನಡೆಯಿತು.

ಸಭೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ಜಿಲ್ಲಾ ಬಿ.ಜೆ.ಪಿ. ಮಾಜಿ ಅಧ್ಯಕ್ಷರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪ್ರಾಬಾರಿಯಾದ ಬಿ.ಬಿ. ಭಾರತೀಶ್, ಸೊಮವಾರಪೇಟೆ ತಾಲೂಕು ಅಧ್ಯಕ್ಷ ಮನುಕುಮಾರ್ ರೈ, ಜಿಲ್ಲೆಯ ಮತ್ತು ತಾಲೂಕಿನ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭ ಅಲ್ಲಿನ ಶಕ್ತಿ ಕೇಂದ್ರದ ಪ್ರಮುಖರಾಗಿ ಗ್ರಾ.ಪಂ. ಸದಸ್ಯರಾಗಿದ್ದ ಕೆ.ಜಿ. ನವೀನ್ (ವಿಜು) ಮತ್ತು ಸಹ ಪ್ರಮುಖರಾಗಿ ಮಂಜುನಾಥ್ ಅವರು ಆಯ್ಕೆಯಾದರು. ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಟಿ.ಕೆ. ಸುಮೇಶ್ ಮತ್ತು ಯುವ ಮೋರ್ಚಾ ಅಧ್ಯಕ್ಷರಾಗಿ ಸಚಿನ್ ಆಯ್ಕೆಯಾದರು.

ಕೂಡಿಗೆ, ಸೆ. 22: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಗಿರೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಆಯ್ಕೆ ಪ್ರಕ್ರಿಯೆಯು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ಮಲ್ಲೇನಹಳ್ಳಿ ಗಣಪತಿ ಸಭಾಂಗಣದಲ್ಲಿ ನಡೆಯಿತು.

ಕೇಂದ್ರದ ಉಪಾಧ್ಯಕ್ಷರಾಗಿ ಓಡಿಯಂಡ ಬೋಪಯ್ಯ ಹಿಂದುಳಿದ ವರ್ಗಕ್ಕೆ ಕೃಷ್ಣ ಮಹಿಳಾ ವಿಭಾಗಕ್ಕೆ ಜಯಶ್ರೀ ಅಧ್ಯಕ್ಷರಾಗಿ ಆಯ್ಕೆಯಾದರು.

ಈ ಸಂದರ್ಭ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಲೋಕೇಶ್‍ಕುಮಾರ್ ಮಾಜಿ ಅಧ್ಯಕ್ಷ ಬಿ.ಬಿ. ಭಾರತೇಶ್ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಮನುಕುಮಾರ ರೈ, ಗಣಿಪ್ರಸಾದ್ ಕೆ.ಕೆ. ಭೋಗಪ್ಪ, ಕೆ. ವರದ, ಆರ್. ಕೃಷ್ಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ತಾಲೂಕು ಪಂಚಾಯಿತಿ ಸದಸ್ಯೆ ಸಬಿತಾ ಚನ್ನಕೇಶವ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.