ಮಡಿಕೇರಿ: ಮಡಿಕೇರಿ ನಗರ ಬಿಜೆಪಿ ವತಿಯಿಂದ ಇತ್ತೀಚೆಗೆ ನಿಧನ ಹೊಂದಿದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರ ಅಧ್ಯಕ್ಷ ಮನು ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಕಾಳಪ್ಪ, ಜಿಲ್ಲಾ ವಕ್ತಾರ ಮಹೇಶ್ ಜೈನಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತ ರಾಕೇಶ್, ಉಪಾಧ್ಯಕ್ಷ ಅರುಣ್ ಕುಮಾರ್, ನಗರದ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಸುಬ್ರಮಣಿ ಹಾಗೂ ಅಪ್ಪಣ್ಣ, ಖಜಾಂಚಿ ಮುರುಗನ್, ಯುವ ಮೋರ್ಚಾ ಅಧ್ಯಕ್ಷ ನವೀನ್ ಪೂಜಾರಿ, ಕನ್ನಿಕೆ, ವಾರ್ಡ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.