ಮಡಿಕೇರಿ, ಸೆ. 22: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ನಗರ ಶಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಾ. 23 ರಂದು (ಇಂದು) ನಗರದ ಪತ್ರಿಕಾ ಭವನದಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ವಹಿಸಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ, ಅಪರ ಜಿಲ್ಲಾಧಿಕಾರಿ ಡಾ. ಸಿ.ವಿ. ಸ್ನೇಹಾ ಹಾಗೂ ಇತರರು ಭಾಗವಹಿಸಲಿದ್ದಾರೆ.