ಶನಿವಾರಸಂತೆ, ಸೆ. 22: ಕೊಡ್ಲಿಪೇಟೆ ಹೋಬಳಿಯ ಕ್ಯಾತೆ ಗ್ರಾಮದ ಕೂಲಿ ಕಾರ್ಮಿಕ ಕುಮಾರ (40) ತನ್ನ ಮನೆಯ ಮೇಲ್ಛಾವಣಿಯ ಮರದ ಕೌಕೋಲಿಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.
ಕುಮಾರ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಹಾಸನದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು ಗುಣಮುಖನಾಗಿರಲಿಲ್ಲ. ವಿಪರೀತ ಮದ್ಯ ಸೇವನೆ ಮಾಡುತ್ತಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡ ಕುಮಾರ ಮನೆಯಲ್ಲಿ ಯಾರು ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎಂದು ತಾಯಿ ನಾಗಮ್ಮ ಕೆಂಚಯ್ಯ ಶನಿವಾರಸಂತೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆ ಸಹಾಯಕ ಠಾಣಾಧಿಕಾರಿ ಹೆಚ್.ಎಂ. ಗೋವಿಂದ್ ಅವರು ಕಲಂ 174 ರೀತ್ಯಾ ಪ್ರಕರಣ ದಾಖಲಿಸಿ ಕ್ರಮಕೈಗೊಂಡಿದ್ದಾರೆ.