ಬೆಂಗಳೂರು, ಸೆ. 23: ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ (65) ಇಂದು ನಿಧನರಾದರು. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಕೊರೊನಾ ಪರೀಕ್ಷೆ ಕಡ್ಡಾಯವಾಗಿದ್ದ ಹಿನ್ನೆಲೆಯಲ್ಲಿ ತಾ. 11ರಂದು ಪರೀಕ್ಷೆ ಮಾಡಿಸಿಕೊಂಡಾಗ ಸುರೇಶ್ ಅಂಗಡಿಯವರಿಗೆ ಕೊರೊನಾ ದೃಢಪಟ್ಟಿತ್ತು. ಯಾವುದೇ ರೋಗ ಲಕ್ಷಣಗಳಿಲ್ಲದೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.