ಶ್ರೀಮಂಗಲ, ಸೆ. 23: ಬಿರುನಾಣಿ ಮಹಿಳಾ ಸಮಾಜ ಸಭಾಂಗಣದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬಿರುನಾಣಿ ವಲಯ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕುಪ್ಪಣಮಾಡ ಪ್ರೀತಮ್ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹಾಗೂ ಪೆÇನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಹಾಜರಿದ್ದು, ಇವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಲವು ಯುವಕರು ಸೇರ್ಪಡೆಗೊಂಡರು. ವೇದಿಕೆಯಲ್ಲಿ ಜಿ.ಪಂ. ಸದಸ್ಯ ಮುಕ್ಕಾಟೀರ ಶಿವು ಮಾದಪ್ಪ, ತಾ.ಪಂ. ಸದಸ್ಯ ಪೆÇಯಿಲೆಂಗಡ ಪಲ್ವಿನ್ ಪೂಣಚ್ಚ, ನಿಕಟಪೂರ್ವ ವಲಯ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ಮುಖಂಡರಾದ ತೀತಿರ ಧರ್ಮಜ ಉತ್ತಪ್ಪ ಮತ್ತಿತರರು ಇದ್ದರು.