ಮಡಿಕೇರಿ, ಸೆ. 23: ಎನ್‍ಎಂಎಂಎಸ್ (ನ್ಯಾಷನಲ್ ಮೆಸ್ ಕಂ ಮೆರಿಟ್ ಸ್ಕಾಲರ್‍ಶಿಪ್) ಕೇಂದ್ರ ಸರ್ಕಾರದಿಂದ ಸರ್ಕಾರಿ, ಅನುದಾನಿತ ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 9ನೇ ತರಗತಿಗೆ ದಾಖಲಾದಾಗ ಎನ್‍ಎಸ್‍ಪಿ (ನ್ಯಾಷನಲ್ ಸ್ಕಾಲರ್‍ಶಿಪ್ ಪೋರ್ಟಲ್) ವೆಬ್ ಪೋರ್ಟಲ್‍ನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ರಿಜಿಸ್ಟರ್ ಆಗಿ ಅರ್ಜಿ ಸಲ್ಲಿಸಬೇಕಿದೆ. 9ನೇ ತರಗತಿಯಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳನ್ನು ಪ್ರೆಸ್ ಎಂದು ಪರಿಗಣಿಸಲಾಗುತ್ತದೆ. ಈ ವಿದ್ಯಾರ್ಥಿ ವೇತನವು 10, 11 ಮತ್ತು 12ನೇ ತರಗತಿಗಳಲ್ಲಿ ಸಹ ದೊರೆಯುವುದರಿಂದ ಆಯಾಯ ತರಗತಿಗಳಲ್ಲಿ ಸಹ ಎನ್‍ಎಸ್‍ಪಿ ನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬೇಕಿದೆ. ಈ ವಿದ್ಯಾರ್ಥಿಗಳನ್ನು ರಿನಿವಲ್ ಎಂದು ಪರಿಗಣಿಸಲಾಗುತ್ತದೆ.
ಈ ಪ್ರಸ್ತುತ 2020-21ನೇ ಸಾಲಿನಲ್ಲಿ ಎನ್‍ಎಸ್‍ಪಿ ನಲ್ಲಿ ಅರ್ಜಿ ಸಲ್ಲಿಸಲು 2016-2017, 2018 (ರಿನಿವಲ್) ಮತ್ತು 2019 (ಪ್ರೆಸ್)ರಲ್ಲಿ ಎನ್‍ಎಂಎಂಎಸ್ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಹರಾಗಿದ್ದು, ಈ ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ಈಗಾಗಲೇ ಸಂಬಂಧಿಸಿದ ಶಾಲೆಗಳಿಗೆ ರವಾನಿಸಲಾಗಿದೆ. ಕೊಡಗು ಜಿಲ್ಲೆಯ ಒಟ್ಟು ಗುರಿ 160 (ರಿನಿವಲ್-110+ಪ್ರೆಸ್-50) ಆಗಿದೆ. ಹೀಗಾಗಿ ಈ ವಿದ್ಯಾರ್ಥಿವೇತನ ಪಡೆಯುವ ನಿಟ್ಟಿನಲ್ಲಿ ಸಂಬಂಧಿಸಿದ ವಿದ್ಯಾರ್ಥಿಗಳು, ಪೋಷಕರು, ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತುರ್ತು ಕ್ರಮವಹಿಸಲು ಕೋರಿದೆ.
ಆನ್‍ಲೈನ್ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರನ್ನು ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕರು (ಅಭಿವೃದ್ಧಿ ಹಾಗೂ ಪ್ರಾಂಶುಪಾಲರು ತಿಳಿಸಿದ್ದಾರೆ.