*ಗೋಣಿಕೊಪ್ಪಲು, ಸೆ. 23: ತಿತಿಮತಿ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಜಮಾಬಂದಿ ಸಭೆ ತಾ. 28ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಪತಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನೋಡೆಲ್ ಅಧಿಕಾರಿಯಾಗಿ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅಂಕಯ್ಯ ಪಾಲ್ಗೊಳ್ಳುವರು ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಮತಾ ಜಗದೀಶ್ ತಿಳಿಸಿದ್ದಾರೆ.