ಕೂಡಿಗೆ, ಸೆ. 23: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದ ದಿಡ್ಡಳ್ಳಿ ಪುನರ್ವಸತಿ ಕೇಂದ್ರಕ್ಕೆ ಹೋಗುವ ತೀರ ಹಾಳಾಗಿ ಕೆಸರುಮಯವಾಗಿದ್ದ ರಸ್ತೆಯನ್ನು ಗ್ರಾಮ ಪಂಚಾಯಿತಿ ಅನುದಾನದಲ್ಲಿ ದುರಸ್ತಿ ಮಾಡಲಾಗಿದೆ. ಇದರಿಂದಾಗಿ ಹಾಡಿಯ ಗ್ರಾಮಸ್ಥರು ತಿರುಗಾಡಲು ಅನುಕೂಲವಾದಂತಾಗಿದೆ.