ಗೋಣಿಕೊಪ್ಪಲು, ಸೆ. 23: ಹುದಿಕೇರಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಚೆಂಗುಲಂಡ ಆರ್. ತಿಮ್ಮಯ್ಯ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಹುದಿಕೇರಿ ಶಕ್ತಿ ಕೇಂದ್ರ ಪ್ರಮುಖ್ ಬೊಜ್ಜಂಗಡ ಸುನಿಲ್ ಮತ್ತು ಕೇಚಟ್ಟಿರ ಅರುಣ್ ರವರ ಸಹಕಾರದೊಂದಿಗೆ ತಾಲೂಕು ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಸೇರ್ಪಡೆಯಾದರು. ಇವರೊಂದಿಗೆ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಚಂಗುಲಂಡ ಗೌತಮ್, ಚಂಗುಲಂಡ ಕಿರಣ್, ಬಲ್ಯಮಿದೇರಿರ ಸಿ. ರಮೇಶ್ ರಂಜಿ, ಬಲ್ಯಮಿದೇರಿರ ಆರ್. ವಿಪಿನ್, ಪೆÇರಂಗಡ ಕೆ. ಚೇತನ್, ತಿತೀರ ಎ. ಜೀವನ್, ಕೊಟ್ರಮಾಡ ಕೆ. ಕಿಟ್ಟಿ ಇವರುಗಳು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಬಿಜೆಪಿ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭ ಭಾರತಿಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುಞ್ಞಂಗಡ ಅರುಣ್ ಭೀಮಯ್ಯ, ಜಿಲ್ಲಾ ಖಜಾಂಚಿ ಚೆಪ್ಪುಡೀರ ಮಾಚಯ್ಯ, ತಾಲೂಕು ಬಿಜೆಪಿ ಉಪಾಧ್ಯಕ್ಷ ಕುಪ್ಪಂಡ ಗಿರೀಶ್, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅಜ್ಜಿಕುಟ್ಟೀರ ಪ್ರವೀಣ್, ವಾಟೇರಿರ ಬೋಪಣ್ಣ, ತಾಲೂಕು ಪಂಚಾಯಿತಿ ಸದಸ್ಯ ಜಯಾ ಪೂವಯ್ಯ, ತಾಲೂಕು ಬಿಜೆಪಿ ಕೃಷಿ ಮೋರ್ಚಾದ ಅಧ್ಯಕ್ಷ ಕಟ್ಟೇರ ಈಶ್ವರ ತಿಮ್ಮಯ್ಯ ಹಾಗೂ ಪಕ್ಷದ ಪದಾಧಿಕಾರಿಗಳು ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.