ಗೋಣಿಕೊಪ್ಪಲು, ಸೆ. 23: ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ವೀರಾಜಪೇಟೆ ತಾಲೂಕು ಅಧ್ಯಕ್ಷ ಸೋಮೆಯಂಡ ಕವನ್ ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಹಾಲುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯುವ ಮೋರ್ಚಾ ಪದಾಧಿಕಾರಿಗಳ ಆಯ್ಕೆ ನಡೆಯಿತು.
ನೂತನ ಅಧ್ಯಕ್ಷರಾಗಿ ಕಿರಣ್ ಪೂವಯ್ಯ, ಉಪಾಧ್ಯಕ್ಷರಾಗಿ ಎಂ. ಬಿದ್ದಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎಸ್. ಮಿಲನ್ ಅವರನ್ನು ಈ ಸಂದರ್ಭ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಶಕ್ತಿ ಕೇಂದ್ರದ ಪ್ರಮುಖರಾದ ರಘು ಗಣೇಶ್, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮೇಕೆರಿರ ಮಂಜುನಾಥ್, ತಾಲೂಕು ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನವೀನ್, ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್, ಸದಸ್ಯರಾದ ಜಮ್ಮಡ ಗೌತಮ್, ಪ್ರಧಾನ್ ಬೋಪಣ್ಣ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.