ಮಡಿಕೇರಿ, ಸೆ. 24: ಪ್ರಸಕ್ತ ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಕೊಡಗು ಜಿಲ್ಲೆಗೆ ಪ.ಜಾ-1. ಪ.ಪಂ-6, ಅ.ಸಂ-2, ವಿಶೇಷಚೇತನರು-1, ವಿಧವೆಯರು-1, ಸಂಕಷ್ಟಕೊಳಗಾದವರು-1, ಇತರ-7, ಒಟ್ಟು 19 ಭೌತಿಕ ಗುರಿಗಳನ್ನು ಅನುಷ್ಠಾನಗೊಳಿಸಲು 1:3 ಅನುಪಾತದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ, ಹಾಗೂ ಕೃಷಿಯೇತರ ಚಟುವಟಿಕೆಗಳ (ಹಂದಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿಪಾರ್ಲರ್, ಟೈಲರಿಂಗ್, ವ್ಯಾಪಾರ, ಇತ್ಯಾದಿಗಳಿಗೆ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು 18 ರಿಂದ 55 ವರ್ಷ ವಯೋಮಿತಿಗೊಳಪಟ್ಟು ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಅವಕಾಶವಿದೆ. ಜಿಲ್ಲಾ ವ್ಯವಸ್ಥಾಪಕರ ಕಚೇರಿ/ ಉಪ ನಿರ್ದೇಶಕರ ಕಚೇರಿ, ಹಾಗೂ ಜಿಲ್ಲೆಯ 3 ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಉದ್ಯೋಗಿನಿ ಯೋಜನೆಯ ಅರ್ಜಿಗಳು ಲಭ್ಯವಿದ್ದು ಅರ್ಹ ಮಹಿಳೆಯರು ಕಚೇರಿಗಳಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ತಾ. 30 ರೊಳಗೆ ಸಲ್ಲಿಸಬಹುದಾಗಿದೆ.

ಅರ್ಹ ಫಲಾನುಭವಿಗಳು 18 ರಿಂದ 55 ವರ್ಷದೊಳಗಿನ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ/ ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ ರೂ. 1 ಲಕ್ಷದಿಂದ ರೂ. 3 ಲಕ್ಷ ಹಾಗೂ ಶೇ. 50, ಸಹಾಯಧನ ನೀಡಲಾಗುತ್ತದೆ. ಕುಟುಂಬದ ವಾರ್ಷಿಕ ಆದಾಯ ರೂ. 2 ಲಕ್ಷಕ್ಕೆ ಮೀರಬಾರದು. ವಿಧವೆಯರು, ವಿಶೇಷಚೇತನರು, ಸಂಕಷ್ಟ ಮಹಿಳೆ, ಅಲ್ಪಸಂಖ್ಯಾತರು ಮತ್ತು ಇತರ ವರ್ಗದರಿಗೆ ಘಟಕ ವೆಚ್ಚ ರೂ. 1 ಲಕ್ಷದಿಂದ ರೂ. 3 ಲಕ್ಷ ಹಾಗೂ ಶೇ. 30 ಸಹಾಯಧನ ನೀಡಲಾಗುವುದು ಮತ್ತು ಕುಟುಂಬದ ವಾರ್ಷಿಕ ಆದಾಯ ರೂ. 1.50 ಲಕ್ಷಕ್ಕೆ ಮೀರಬಾರದು. ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಚುನಾವಣಾ ಗುರುತಿನ ಚೀಟಿ. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಿ.ಪಿ.ಎಲ್. ಕಾರ್ಡ್, ಪಾಸ್‍ಪೋರ್ಟ್ ಸೈಜ್ ಫೋಟೋ ಈ ದಾಖಲಾತಿಗಳನ್ನು ಒದಗಿಸಬೇಕು.

ಜಿಲ್ಲಾ ಕಚೇರಿ, ಜಿಲ್ಲಾ ವ್ಯವಸ್ಥಾಪಕರ ಕಚೇರಿ/ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್, ಮೈಸೂರು ರಸ್ತೆ, ಮಡಿಕೇರಿ, ದೂರವಾಣಿ ಸಂಖ್ಯೆ 7996368687. ಮಡಿಕೇರಿ ತಾಲೂಕು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ರೇಸ್‍ಕೋರ್ಸ್ ರಸ್ತೆ ಹೊಸ ಬಡಾವಣೆ ಮಡಿಕೇರಿ, ದೂರವಾಣಿ ಸಂಖ್ಯೆ-08272-228197. ಸೋಮವಾರಪೇಟೆ ತಾಲೂಕು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಸ್ತ್ರೀಶಕ್ತ್ತಿ ಭವನ, ತಾಲೂಕು ಪಂಚಾಯಿತಿ ಆವರಣ, ಸೋಮವಾರಪೇಟೆ, ದೂರವಾಣಿ ಸಂಖ್ಯೆ: 08276-282281. ವೀರಾಜಪೇಟೆ ತಾಲೂಕು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿಲ್ಲಾ ಸ್ತ್ರೀಶಕ್ತಿ ಮಾರುಕಟ್ಟೆ ಸಂಕೀರ್ಣ ಕಟ್ಟಡ ಉಪ ನೋಂದಾವಣಾಧಿಕಾರಿಗಳ ಕಚೇರಿ ಎದುರು ಪೊನ್ನಂಪೇಟೆ, ದೂರವಾಣಿ ಸಂಖ್ಯೆ 08274-249788 ನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.