ಸಿದ್ದಾಪುರ, ಸೆ. 23: ಬಿಜೆಪಿ ಸೇವಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ನೆಲ್ಯಹುದಿಕೇರಿ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕುಂಬಾರಗುಂಡಿ ವ್ಯಾಪ್ತಿಯಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಅನೀಶ್, ಕುಟ್ಟಾಪಿ, ದಿನು, ತಮ್ಮಣಿ ಇನ್ನಿತರರು ಹಾಜರಿದ್ದರು.