ನಾಪೋಕ್ಲು, ಸೆ. 24: ರಾಜ್ಯ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ವತಿಯಿಂದ ತಾ. 26 ರಂದು (ನಾಳೆ) ಗೋವು ಪೂಜೆ,ಭೂಮಿ ಪೂಜೆ,ಗಂಗಾಪೂಜೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ನಾಪೋಕ್ಲು ಭಗವತಿ ದೇವಾಲಯದಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿರುವ ಕಾರ್ಯಕ್ರಮವು ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ನವೀನ್ ಕುಮಾರ್ ನೇತೃತ್ವದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರು, ಮಡಿಕೇರಿ ತಾಲೂಕು ಗ್ರಾಮಾಂತರ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ರೈತ ಮೋರ್ಚಾ ಮಡಿಕೇರಿ ತಾಲೂಕು ಅಧ್ಯಕ್ಷ ಶಿವಚಾಳಿಯಂಡ ಜಗದೀಶ್ ತಿಳಿಸಿದ್ದಾರೆ.