ಗೋಣಿಕೊಪ್ಪಲು, ಸೆ. 24: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ವೀರಾಜಪೇಟೆ ತಾಲೂಕು ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಬಿಜೆಪಿ ತಾಲೂಕು ಒಬಿಸಿ ಮೋರ್ಚಾದ ವತಿಯಿಂದ ಹಣ್ಣು-ಹಂಪಲು ವಿತರಿಸಲಾಯಿತು.
ಬಿಜೆಪಿ ವೀರಾಜಪೇಟೆ ತಾಲೂಕು ಮಂಡಲದ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ತಾಲೂಕು ಅಧ್ಯಕ್ಷ ಕೆ. ರಾಜೇಶ್ ಸಮ್ಮುಖದಲ್ಲಿ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.
ಈ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಕೊಡಗು ಜಿಲ್ಲಾ ಬಿಜೆಪಿ ಉಸ್ತುವಾರಿ ರಾಜೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ಮುಖಂಡರಾದ ಪಟ್ರುಪಂಡ ರಘು ನಾಣಯ್ಯ, ರೀಣಾ ಪ್ರಕಾಶ್, ತಾಲೂಕು ಪ್ರಧಾನ ಕಾರ್ಯದರ್ಶಿ ವಾಟೇರಿರ ಬೋಪಣ್ಣ, ತಾಲೂಕು ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ನವೀನ್, ಉಪಾಧ್ಯಕ್ಷ ಚಂದ್ರ, ತಾಲೂಕು ಪಂಚಾಯಿತಿ ಸದಸ್ಯರಾದ ಗಣೇಶ್, ಸದಸ್ಯರಾದ ಮಧು, ಸುಧಿ, ಭರತ್, ವೀರಾಜಪೇಟೆ ನಗರ ಅಧ್ಯಕ್ಷ ಕೃಷ್ಣ, ಪಧಾನ ಕಾರ್ಯದರ್ಶಿ ಜೀವನ್, ಪಕ್ಷದ ಕಾರ್ಯಕರ್ತರು, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.