ಪೆÇನ್ನಂಪೇಟೆ, ಸೆ. 25: ಕರ್ನಾಟಕ ರಾಜ್ಯದ ಪ್ರತಿಭಾವಂತ ಸಂಸದೀಯ ಪಟುಗಳ ಪುಸ್ತಕ ಮಾಲಿಕೆಯಡಿ ಕರ್ನಾಟಕ ವಿಧಾನಮಂಡಲದ ಗ್ರಂಥಾಲಯ ಸಮಿತಿ ವತಿಯಿಂದ ಪ್ರಕಟಿಸಲಾಗಿರುವ ಮಾಜಿ ಶಾಸಕ, ಹಿರಿಯ ಸಂಸದೀಯ ಪಟು ದಿ. ಎ.ಕೆ. ಸುಬ್ಬಯ್ಯ ಅವರ ಕುರಿತ ಪುಸ್ತಕ ಬಿಡುಗಡೆ ಸಮಾರಂಭವು ತಾ. 26ರಂದು (ಇಂದು) ಬೆಂಗಳೂರಿನಲ್ಲಿ ಜರುಗಲಿದೆ.
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಿ ದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮತ್ತೋರ್ವ ಮಾಜಿ ಶಾಸಕರಾಗಿರುವ ಡಾ. ಮಹಾದೇವ ಬಣಕಾರ್ ಅವರ ಕುರಿತ ಪುಸ್ತಕವೂ ಬಿಡುಗಡೆಯಾಗಲಿದೆ.