ಮಡಿಕೇರಿ, ಸೆ. 25: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಮತ್ತು ರೋಟರಿ ಇವರ ಸಂಯುಕ್ತ ಆಶ್ರಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ ಮತ್ತು ತರಬೇತಿ ಕಾರ್ಯಾಗಾರವು ತಾ. 26 ರಂದು (ಇಂದು) ಬೆಳಗ್ಗೆ 10.30 ಗಂಟೆಗೆ ನಗರದ ರೋಟರಿ ಸಭಾಂಗಣದಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಮಡಿಕೇರಿ ರೋಟರಿ ಅಧ್ಯಕ್ಷ ಪಿ.ಟಿ.ಗಣಪತಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ವಕೀಲರ ಸಂಘದ ಉಪಾಧ್ಯಕ್ಷ ಪಿ.ಯು.ಪ್ರೀತಂ, ವಕೀಲೆ ಕೆ.ಎಂ.ಮೀನಾಕುಮಾರಿ ಇತರರು ಪಾಲ್ಗೊಳ್ಳಲಿದ್ದಾರೆ.