*ಗೋಣಿಕೊಪ್ಪಲು, ಸೆ. 25: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ನೂತನ ಶಾಖೆಯು ಬಾಳೆಲೆಯಲ್ಲಿ ತಾ. 27ರಂದು ಉದ್ಘಾಟನೆಯಾಗಲಿದೆ. ಶಾಸಕ ಕೆ.ಜಿ.ಬೋಪಯ್ಯ ಶಾಖೆಯ ನೂತನ ಕಟ್ಟಡವನ್ನು ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ನಗದು ಕೌಂಟರ್ ಅನ್ನು ಸ್ಥಳೀಯ ಎಪಿಸಿಎಂಎಸ್‍ನ ಮಾಜಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಉದ್ಘಾಟಿಸಲಿದ್ದು, ಭದ್ರತಾ ಕೊಠಡಿಯನ್ನು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಎಸ್. ಪೂವಯ್ಯ ಉದ್ಘಾಟಿಸಲಿದ್ದಾರೆ.

ಬಳಿಕ 10.30ಕ್ಕೆ ಸ್ಥಳೀಯ ವಿಜಯಲಕ್ಷ್ಮಿ ಪಿಯು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಬಾಳೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‍ನ ಅಧ್ಯಕ್ಷ ಚಿಮ್ಮಣಮಾಡ ಕೃಷ್ಣ ಗಣಪತಿ ಮುಖ್ಯ ಅಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಅಧ್ಯಕ್ಷತೆ ವಹಿಸಲಿದ್ದಾರೆ.