ಸೋಮವಾರಪೇಟೆ, ಸೆ. 25: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲೂಕು ಘಟಕದ ಆಶ್ರಯದಲ್ಲಿ ತಾ. 26ರಂದು ಸ್ಥಳೀಯ ಚನ್ನಬಸಪ್ಪ ಸಭಾಂಗಣದಲ್ಲಿ, ಸುಲೋಚನಾ-ಡಾ|| ನಾಗರಾಜ್ ದಂಪತಿ ದತ್ತಿ ನಿಧಿ ಸಮಾರಂಭ ಹಾಗೂ ಎಸ್‍ಎಸ್‍ಎಲ್‍ಸಿ, ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.

ತಾ. 26ರಂದು (ಇಂದು) ಮಧ್ಯಾಹ್ನ 2.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಉದ್ಘಾಟಿಸಲಿದ್ದಾರೆ. ತಾಲೂಕು ಕ.ಸಾ.ಪ. ಅಧ್ಯಕ್ಷ ಎಚ್.ಜೆ. ಜವರ ಅಧ್ಯಕ್ಷತೆ ವಹಿಸಲಿದ್ದು, ‘ಜಾನಪದ ಇತಿಹಾಸ ಹಾಗೂ ಮಠಗಳು ತೌಲಾನಿಕವಾಗಿ ಕನ್ನಡ’ ಎಂಬ ವಿಷಯದ ಕುರಿತು ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಭಾಷಾ ಅಧ್ಯಾಪಕ ವೆಂಕಟೇಶ್‍ನಾಯಕ್ ವಿಚಾರ ಮಂಡಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಪಾಂಡು, ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಪದವೀಧರ ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ, ದತ್ತಿ ಸ್ಥಾಪಕರಾದ ಎಂ.ಜೆ. ನಾಗರಾಜು ಮತ್ತು ಸುಲೋಚನಾ, ಜಿಲ್ಲಾ ಸಾಹಿತ್ಯ ಪರಿಷತ್‍ನ ಕೋಶಾಧಿಕಾರಿ ಎಸ್.ಎ. ಮುರಳೀಧರ್, ನಿರ್ದೇಶಕ ಎಸ್.ಪಿ. ಪ್ರಸನ್ನ, ಕವನ್ ಕಾರ್ಯಪ್ಪ, ಸುಮಾ ಸುದೀಪ್ ಅವರುಗಳು ಭಾಗವಹಿಸಲಿದ್ದಾರೆ.