ಶನಿವಾರಸಂತೆ, ಸೆ. 25: ಮೂದ್ರವಳ್ಳಿ ಬೈರಾಚಾರ್ಯ ದೇವಮ್ಮ ಸ್ಮಾರಕ ದತ್ತಿ ಪ್ರಾಯೋಜಿತ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮ ಭಾರತಿ ವಿದ್ಯಾಸಂಸ್ಥೆಯ ನಿಡ್ತ ಬಸಪ್ಪ ಸಭಾಂಗಣದಲ್ಲಿ ಅ. 2 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಸಮಾಜ ಸೇವಕ ಬಿ.ಕೆ. ಚಿಣ್ಣಪ್ಪ ಕಾರ್ಯಕ್ರಮ ಉದ್ಘಾಟಿಸುತ್ತಾರೆ. ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಬಿ. ನಾಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಯಾಗಿ ಲಯನ್ಸ್ ಸಂಸ್ಥೆ ಅಧ್ಯಕ್ಷ ಬಿ.ಸಿ. ಧರ್ಮಪ್ಪ ಪಾಲ್ಗೊಳ್ಳಲಿದ್ದಾರೆ. ಶಿಕ್ಷಕ ಜಯಕುಮಾರ್ ಮಹಾತ್ಮ ಗಾಂಧೀಜಿಯವರ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಪ್ರೆಸ್‍ಕ್ಲಬ್ ಅಧ್ಯಕ್ಷ ಎಚ್.ಆರ್. ಹರೀಶ್ ಪ್ರಸ್ತುತ ವಿದ್ಯಮಾನಗಳ ವಿಶ್ಲೇಷಣೆ ಮಾಡಲಿದ್ದಾರೆ. ಎಸ್‍ಎಸ್‍ಎಲ್‍ಸಿ ಹಾಗೂ ಪಿಯು ಪರೀಕ್ಷೆಗಳಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು, ನಿವೃತ್ತ ಸೈನಿಕರನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಗುವದು ಎಂದು ಸಂಚಾಲಕ ಬಿ.ಬಿ. ಶಿವಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.