ಮಡಿಕೇರಿ, ಸೆ. 26: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಅಕ್ಟೋಬರ್ 1 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಡಿಕೇರಿ ಹಾಗೂ ಗೋಣಿಕೊಪ್ಪದ ದಸರಾ ಆಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ತಲಕಾವೇರಿಯಲ್ಲಿ ನಡೆಯುವ ತೀರ್ಥೋದ್ಭವ ಕುರಿತಂತೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕೊಳಕೇರಿ ಗ್ರಾಮದ ಮೂಟೇರಿ ಶ್ರೀ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ. ನರೇಂದ್ರ ತಿಳಿಸಿದ್ದಾರೆ.