ನವದೆಹಲಿ, ಸೆ. 26: ಬಿಜೆಪಿ ಮುಖ್ಯಸ್ಥ ಜಗತ್ ಪ್ರಕಾಶ್ ನಡ್ಡಾ ಅವರು ರಾಷ್ಟ್ರೀಯ ಪದಾಧಿಕಾರಿಗಳ ಹೊಸ ತಂಡವನ್ನು ಶನಿವಾರ ಪ್ರಕಟಿಸಿದ್ದಾರೆ. ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವ ಮೋರ್ಚಾ ಮುಖ್ಯಸ್ಥರಾಗಿ ಮತ್ತು ರಾಜ್‍ಕುಮಾರ್ ಚಹಾರ್ ಕಿಸಾನ್ ಮೋರ್ಚಾ ಅಧ್ಯಕ್ಷರಾಗಿ ನೇಮಕ ಗೊಂಡಿದ್ದಾರೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಲ್ಲಿ ಭೂಪೇಂದ್ರ ಯಾದವ್, ಕೈಲಾಶ್ ವಿಜಯವರ್ಗಿಯಾ ಮತ್ತು ಸಿ.ಟಿ. ರವಿ ಸೇರಿದ್ದಾರೆ. ವಕ್ತಾರರಾಗಿ ರಾಜೀವ್ ಚಂದ್ರಶೇಖರ್ ನೇಮಕಗೊಂಡಿದ್ದಾರೆ. ನೂತನ ಪದಾಧಿಕಾರಿಗಳಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.