ಮಡಿಕೇರಿ, ಸೆ. 26: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮದಲಾಪುರ ನಿವಾಸಿ ಜಿ. ಮೂರ್ತಿ (52) ಎಂಬವರು ರಸ್ತೆ ಅಪಘಾತದಿಂದ ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ ಟಿವಿಎಸ್ ಮೊಪೆಡ್ನಲ್ಲಿ ತೆರಳುತ್ತಿದ್ದ ವೇಳೆ, ನಿಯಂತ್ರಣ ಕಳೆದುಕೊಂಡ ವಾಹನದಿಂದ ಬಿದ್ದಿರುವ ಇವರು ಮಾರಣಾಂತಿಕ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.