ಮಡಿಕೇರಿ, ಸೆ.26: ಕೊಡಗು ಜಿಲ್ಲಾ ಕೋವಿಡ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳಿಗೆ ಕರ್ಣಾಟಕ ಬ್ಯಾಂಕ್‍ನಿಂದ 1 ಸಾವಿರ ಪಿಪಿಇ ಕಿಟ್‍ಗಳನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಮೂಲಕ ಸಾಂಕೇತಿಕವಾಗಿ ನೀಡಲಾಯಿತು.
ಕರ್ಣಾಟಕ ಬ್ಯಾಂಕ್‍ನ ಮೈಸೂರು ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕ ಬಿ. ಚಂದ್ರಶೇಖರ ಈ ಸಂದರ್ಭ ಮಾತನಾಡಿ, ಕೊಡಗಿನ ವೈದ್ಯಕೀಯ ಆರೋಗ್ಯ ಸಿಬ್ಬಂದಿಗಳಿಗೆ 3.60 ಲಕ್ಷ ರೂ. ಮೌಲ್ಯದ 1 ಸಾವಿರ ಪಿಪಿಇ ಕಿಟ್‍ಗಳನ್ನು ನೀಡುತ್ತಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಜನರ ಆರೋಗ್ಯ ರಕ್ಷಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳ ಪಾತ್ರ ಮಹತ್ವದ್ದು, ಈ ಹಿನೆÀ್ನಲೆಯಲ್ಲಿ ಈಗಾಗಲೇ ಕರ್ಣಾಟಕ ಬ್ಯಾಂಕ್ ಮಂಗಳೂರು, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪಿಪಿಇ ಕಿಟ್‍ಗಳನ್ನು ನೀಡಿದ್ದು ಕೊಡಗು ಜಿಲ್ಲೆಯ ಆರೋಗ್ಯ ಕಾರ್ಯಕರ್ತರಿಗೂ ಇದೀಗ ನೆರವು ನೀಡಲು ಮುಂದಾಗಿದ್ದೇವೆ ಎಂದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಕರ್ಣಾಟಕ ಬ್ಯಾಂಕ್‍ನ ನೆರವನ್ನು ಪ್ರಶಂಶಿಸಿದರು. ಈ ಸಂದರ್ಭ ಕರ್ಣಾಟಕ ಬ್ಯಾಂಕ್‍ನ ಮೈಸೂರು ಪ್ರಾದೇಶಿಕ ಕಚೇರಿಯ ಮುಖ್ಯ ಪ್ರಬಂಧಕ ಶ್ರೀಶ, ಮಡಿಕೇರಿ ಶಾಖಾ ಪ್ರಬಂಧಕ ಎ.ರಮೇಶ್, ಪತ್ರಕರ್ತ ಅನಿಲ್ ಎಚ್.ಟಿ. ಹಾಜರಿದ್ದರು.