ಮಡಿಕೇರಿ, ಸೆ. 27: ಕೋವಿಡ್-19 ಜಿಲ್ಲಾ ಸಲಹಾ ಸಮಿತಿ ಸದಸ್ಯರು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಮಿತಿ ಸದಸ್ಯರು ಆಸ್ಪತ್ರೆಯಲ್ಲಿನ ಆಹಾರ, ಸ್ವಚ್ಛತೆಯ ವ್ಯವಸ್ಥೆ ಹಾಗೂ ಇತರ ಸೌಲಭ್ಯಗಳ ಕುರಿತು ಪರಿಶೀಲಿಸಿದರು. ನಂತರ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು ಎಂದು ಕೋವಿಡ್-19 ತಜ್ಞರ ಸಮಿತಿಯ ಡಾ. ಮೋಹನ್ ಅಪ್ಪಾಜಿ ತಿಳಿಸಿದ್ದಾರೆ.