ಮಡಿಕೇರಿ, ಸೆ. 27: ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜಯಂತಿ ಕಾರ್ಯಕ್ರಮವನ್ನು ಭಾರತೀಯ ವಿದ್ಯಾ ಭವನದಲ್ಲಿ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಉಪಾಧ್ಯಾಯರು ಸಣ್ಣ ಪ್ರಾಯದಲ್ಲೇ ಪೆÇೀಷಕರನ್ನು ಕಳೆದುಕೊಂಡು ಸೋದರ ಮಾವನ ಆಶ್ರಯದಲ್ಲಿ ರಾಜಸ್ಥಾನದಲ್ಲಿ ವಿದ್ಯಾಭ್ಯಾಸ ಪಡೆದರು. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಭಾರತೀಯ ಜನ ಸಂಘದ ಮುಖಾಂತರ ಜನರಿಗಾಗಿ ಸೇವೆ ಸಲ್ಲಿಸಿದರು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಉಪಾಧ್ಯಾಯರು ದೇಶಕ್ಕಾಗಿ ತಮ್ಮನ್ನು ತಾವು ಸಮರ್ಪಣೆ ಮಾಡಿಕೊಂಡಿದ್ದರು. ಇಡೀ ದೇಶವೇ ತನ್ನ ಕುಟುಂಬ ಎನ್ನುವ ಮನೋಭಾವನೆ ಹೊಂದಿದ್ದರು ಎಂದರು.
ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರಾದ ಮನೋಹರ್ ಜಿ ಪಾಟ್ಕರ್, ಬಿಜೆಪಿ ನಗರಾಧ್ಯಕ್ಷ ಮನು ಮಂಜುನಾಥ್ ಮತ್ತಿತರರು ಇದ್ದರು.