ಮಡಿಕೇರಿ, ಸೆ. 27: ತಲಕಾವೇರಿ ಹಾಗೂ ಭಾಗಮಂಡಲ ಪವಿತ್ರ ಕ್ಷೇತ್ರವನ್ನು ಪ್ರವಾಸಿ ತಾಣಗಳ ಪಟ್ಟಿಯ ಹೊರತಾಗಿ ಧಾರ್ಮಿಕ ಕ್ಷೇತ್ರವನ್ನಾಗಿ ಉಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ಕೊಡವ ಸಮಾಜಗಳ ಒಕ್ಕೂಟದ ಸಭೆಯಲ್ಲಿ ಕೈಗೊಂಡಿರುವ ತೀರ್ಮಾನಕ್ಕೆ ಶ್ರೀಮಂಗಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಬೆಂಬಲ ವ್ಯಕ್ತಪಡಿಸಿದೆ.
ಇತ್ತೀಚೆಗೆ ಪೊಮ್ಮಕ್ಕಡ ಪರಿಷತ್ನ ಮೂಲಕ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ತಲಕಾವೇರಿ ಹಾಗೂ ಭಾಗಮಂಡಲ ಪುಣ್ಯಕ್ಷೇತ್ರವಾಗಿಯೇ ಪರಿಗಣನೆಯಾಗಬೇಕು ಹೊರತು ಪ್ರವಾಸಿ ತಾಣವಾಗಬಾರದು. ಈ ನಿಟ್ಟಿನಲ್ಲಿ ನಡೆಯುವ ಎಲ್ಲಾ ಪ್ರಯತ್ನಗಳಿಗೆ ಬೆಂಬಲ ನೀಡಲು ತೀರ್ಮಾನಿಸಲಾಯಿತು. ಪರಿಷತ್ನ ಅಧ್ಯಕ್ಷೆ ಕಟ್ಟೇರ ಸುಶೀಲ ಅಚ್ಚಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇತರ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.