ಕೂಡಿಗೆ, ಸೆ. 26: ಮುಖ್ಯ ರಸ್ತೆಯಿಂದ ಗ್ರಾಮದ ಒಳಗಡೆ ಹೋಗುವ ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದರೂ ಇದುವರೆಗೂ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಹೆಬ್ಬಾಲೆ ಗ್ರಾಮಸ್ಥರು ಆರೋಪಿಸಿದ್ದಾರೆ.

ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ವಿಶೇಷ ಅನುದಾನದಲ್ಲಿ ಹೆಬ್ಬಾಲೆಯ ಹಾಸನ ಹೆದ್ದಾರಿಗೆ ಹೊಂದಿಕೊಂಡಂತೆ ಗ್ರಾಮದ ಮುಖ್ಯ ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದರು.

ಅದರೆ ಹತ್ತು ತಿಂಗಳು ಕಳೆದರೂ ಈ ಕಾಮಗಾರಿಯನ್ನು ಪ್ರಾರಂಭ ಮಾಡಿಲ್ಲ. ಸಂಬಂಧಿಸಿದ ಅಧಿಕಾರಿಗಳು ತುರ್ತಾಗಿ ಕಾಮಗಾರಿಯನ್ನು ಪ್ರಾರಂಭ ಮಾಡಲು ಗುತ್ತಿಗೆದಾರರಿಗೆ ಆದೇಶಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.