ಮಡಿಕೇರಿ, ಸೆ. 28: ಜಿಲ್ಲಾ ಪಂಚಾಯತ್ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ ಕೊಡಗು, ಗ್ರಾಮ ಪಂಚಾಯತ್ ಸಂಪಾಜೆ, ಪೆರಾಜೆ, ಚೆಂಬು, ಮದೆನಾಡು, ಪಯಸ್ವಿನಿ ಸಹಕಾರಿ ಸಂಘ ಸಂಪಾಜೆ ಹಾಗೂ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಬಾಲಚಂದ್ರ ಕಳಗಿ ಅಭಿಮಾನಿ ಬಳಗ ಸಂಪಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಸಂಪಾಜೆ ಗ್ರಾಮದ ಸಮಗ್ರ ಅಭಿವೃದ್ಧಿಯಲ್ಲಿ ಮುಂಚೂಣಿಯ ಪಾತ್ರ ವಹಿಸಿದ್ದ ಬಿಜೆಪಿ ಕಾರ್ಯಕರ್ತನಾಗಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕೊಡಗು ಬಿಜೆಪಿಯ ಜಿಲ್ಲಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ದಿವಂಗತ ಬಾಲಚಂದ್ರ ಕಳಗಿ ಅವರ ಸ್ಮರಣಾರ್ಥವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಅ. 2 ರಂದು ಸಂಪಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 9.30ಕ್ಕೆ ಏರ್ಪಡಿಸಲಾಗಿದೆ.