ಅಧ್ಯಾಯ 16 : ಉತ್ತಮ ನಾಗಿರುವುದೇ ವರ: ಸಿಟ್ಟು, ಕ್ರೂರತೆ, ಅಜ್ಞಾನ, ಅಪ್ರಾಮಾಣಿಕತೆ, ಅತಿಯಾಸೆ, ಅನೈತಿಕತೆ, ಅಹಂಕಾರ ಮುಂತಾದವು ವ್ಯಕ್ತಿಯನ್ನು ಆಧ್ಯಾತ್ಮಿಕವಾಗಿ ನಾಶ ಮಾಡುತ್ತವೆ. ಆದರೆ ಮಾನವೀಯತೆ, ಸತ್ಯ, ಅಹಿಂಸೆ, ತಾಳ್ಮೆ, ಇಂದ್ರಿಯಗಳ ನಿಯಂತ್ರಣ ಮುಂತಾದ ಸದ್ಗುಣಗಳು ಜ್ಞಾನಕ್ಕೆ ಕಾರಣವಾಗಿ ಸ್ವತಂತ್ರರನ್ನಾಗಿಸುತ್ತದೆ.

ಅಧ್ಯಾಯ 17: ಮೇರು ಸತ್ಯ : ಇಲ್ಲಿ ಕೃಷ್ಣ ಓಂ ತತ್ ಸತ್ ಮಂತ್ರದ ಮಹತ್ವ ಹೇಳುತ್ತಾನೆ. ಇದರ ಅರ್ಥ ಮೇರು ಸತ್ಯ ಎಂದು. ಓಂನಾಮದಿಂದಲೇ ಸತ್ಕಾರ್ಯ ಆರಂಭಿಸ ಬೇಕು. ಯಜ್ಞ, ದಾನ ಹಾಗೂ ತಪಸ್ಸು ಸತ್ಕಾರ್ಯಗಳು ಎಂದು ವಿವರಿಸುತ್ತಾನೆ.

ಅಧ್ಯಾಯ 18: ಪರಮಾತ್ಮನೊಂದಿಗೆ ಐಕ್ಯ; ಫಲದ ಬಯಕೆಯಿಂದ ಮಾಡುವ ಕರ್ಮಗಳನ್ನು ಬಿಡುವುದು ಸನ್ಯಾಸ, ಆ ಎಲ್ಲಾ ಕರ್ಮಗಳನ್ನು ಮಾಡಿ ಫಲವನ್ನ ಬಯಸದೇ ಇರುವುದು ತ್ಯಾಗ ಎಂದು ಹೇಳುವ ಕೃಷ್ಣನು ಕರ್ಮಯೋಗಿಯಾಗಿ ಬದುಕಬೇಕು. ನಿಮ್ಮ ಕೆಲಸವೇ ನಿಮ್ಮನ್ನು ಆತ್ಮದೊಂದಿಗೆ ಜೋಡಿಸುತ್ತದೆ. ಪರಮಾತ್ಮನೊಂದಿಗೆ ಐಕ್ಯವಾಗಲು ದಾರಿ ತೋರುತ್ತದೆ ಎಂದು ವಿವರಿಸುತ್ತಾನೆ. (ಆಧಾರ)