ಮಡಿಕೇರಿ, ಸೆ.28: ಮಡಿಕೇರಿ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಜಿ.ಟಿ.ರೋಡ್ ಫಿüೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿದ್ದು, ತಾ. 29 ರಂದು (ಇಂದು) ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಸುದರ್ಶನ ವೃತ್ತ, ಚೈನ್‍ಗೇಟ್, ಪುಟಾಣಿನಗರ, ದೇಚೂರು, ಸಿದ್ದಾಪುರ ರಸ್ತೆ, ಜಯನಗರ, ಕೊಡಗು ವಿದ್ಯಾಲಯ ಇಬ್ನಿವಾಳವಾಡಿ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಕೋರಿದ್ದಾರೆ.