ವೀರಾಜಪೇಟೆ, ಸೆ. 28: ಕೊರೊನಾ ಸಾಂಕ್ರಾಮಿಕ ವೈರಸ್ ತಡೆಗಟ್ಟಲು ಅನೇಕ ಕಾರ್ಯಕ್ರಮ ಗಳನ್ನು ಸರಕಾರ ಹಮ್ಮಿಕೊಂಡಿದ್ದರೂ ಕೊರೊನಾ ಇನ್ನು ಮುಂದುವರೆ ದಿರುವುದರಿಂದ ಮುಂದೆ ಎಲ್ಲರೂ ಸ್ವಯಂ ಪ್ರೇರಣೆಯಿಂದ "ನಮ್ಮ ಆರೋಗ್ಯ ನಮ್ಮ ಕೈಯ್ಯಲ್ಲಿ" ಎಂಬಂತೆ ಮುನ್ನೆಚ್ಚರಿಕೆ ವಹಿಸಿ ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಅಂತರ ಕಾಯ್ದು ಕೊಂಡು ಕೊರೊನಾವನ್ನು ಆರಂಭದಿಂದಲೇ ಎದುರಿಸುವಂತಾಗ ಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ಹೇಳಿದರು.

ವೀರಾಜಪೇಟೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇಲ್ಲಿನ ಅರಸು ನಗರದ ಸಮುದಾಯ ಭವನದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ದಾವಣಗೆರೆಯ ಚನ್ನಗಿರಿಯ ಶುೃತಿ ಸಾಂಸ್ಕøತಿಕ ಕಲಾ ತಂಡದವರಿಂದ ಆಯೋಜಿಸಿದ್ದ "ಕೋವಿಡ್-19, ಮದ್ಯಪಾನದ ವಿರುದ್ಧ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಬೀದಿನಾಟಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಶ್ರೀಧರ್ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೀದಿ ನಾಟಕದ ಮೂಲಕ ಜನರಿಗೆ ಜಾಗೃತಿ ಮೂಡಿಸುವುದು ಉತ್ತಮ ಕೆಲಸ ಎಂದರು.

ಅತಿಥಿಯಾಗಿ ಭಾಗವಹಿಸಿದ್ದ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಎಂ.ಕೆ. ದೇಚಮ್ಮ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಮೂಡಿಸಲಾಗುತ್ತಿದೆ. ಮಹಿಳೆ ಕಲಿತರೆ ಕುಟುಂಬವೆ ಕಲಿತಂತೆ ಎಂಬುದನ್ನು ಅರಿತು ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗಬೇಕು ಎಂದರು.

ಸಭೆಯನ್ನುದ್ದೇಶಿಸಿ ಪಟ್ಟಣ ಪಂಚಾಯಿತಿ ಸದಸ್ಯ ಎಸ್.ಹೆಚ್. ಮತೀನ್, ಯೋಜನಾಧಿಕಾರಿ ಸದಾಶಿವ ಮಾತನಾಡಿದರು. ಬಿಟ್ಟಂಗಾಲ ಒಕ್ಕೂಟದ ಉಪಾಧ್ಯಕ್ಷ ರಂಜನ್, ಅರಸು ನಗರದ ಮುತ್ತಪ್ಪ ದೇವಾಲಯ ಸಮಿತಿಯ ಸದಾಶಿವ ಹಾಗೂ ಇತರರು ಉಪಸ್ಥಿತರಿದ್ದರು.

ಚಿಕ್ಕಪೇಟೆ ಒಕ್ಕೂಟದ ಅಧ್ಯಕ್ಷೆ ಪಿ.ಎಸ್. ವಿಮಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು ಹಾಗೂ ಮಕ್ಕಳು ದುಶ್ಚಟಗಳಿಂದ ದೂರ ಇರುವಂತೆ ನೋಡಿಕೊಳ್ಳಬೇಕು ಎಂದರು. ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ರತ್ನ ಮೈಪಾಲ ಸ್ವಾಗತಿಸಿದರು. ಸಂಯೋಜಕಿ ಅಂಬಿಕಾ ವಂದಿಸಿದರು. ಕಾರ್ಯಕ್ರಮದಲ್ಲಿ ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಹಾಜರಿದ್ದರು.