ಗೋಣಿಕೊಪ್ಪಲು, ಸೆ. 28: ಮುಂಬರುವ ಗ್ರಾಮ ಪಂಚಾಯಿತಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಎಲ್ಲಾ ಪಂಚಾಯ್ತಿ ಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಬೇಕೆಂದು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಮನವಿ ಮಾಡಿದರು.

ಗೋಣಿಕೊಪ್ಪಲುವಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆಯೋಜನೆ ಗೊಂಡಿದ್ದ ಪೊನ್ನಂಪೇಟೆ ಬ್ಲಾಕ್‍ನ ವಿವಿಧ ಘಟಕಗಳ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‍ನ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಆಲಿರ ರಶೀದ್, ಕಾಂಗ್ರೆಸ್ ಸೇವಾದಳದ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷ ಥೆರೆಸವಿಕ್ಟರ್ ಮಾತನಾಡಿದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಕೊಳೇರ ಭಾರತಿ, ಕಿಶಾನ್ ಘಟಕದ ತಾಲೂಕು ಅಧ್ಯಕ್ಷ ಚೇರಂಡ ಮೋಹನ್ ಕುಶಾಲಪ್ಪ, ಪ್ರಧಾನ ಕಾರ್ಯದರ್ಶಿ ಎ.ಜೆ. ಬಾಬು ಹಿಂದುಳಿದ ವರ್ಗಗಳ ತಾಲೂಕು ಅಧ್ಯಕ್ಷ ಶಾಜಿ ಅಚ್ಚುತ್ತನ್, ಪರಿಶಿಷ್ಟ ವರ್ಗದ ತಾಲೂಕು ಅಧ್ಯಕ್ಷ ಮಣಿಕುಂಞ, ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷೆ ಎಂ. ಮಂಜುಳ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಮದೆ: ರಾಜಕೀಯ ಪಕ್ಷಗಳು ಬಲವರ್ಧನೆಗೊಳ್ಳಲು ಗ್ರಾಮ ಪಂಚಾಯತ್‍ಗಳಲ್ಲಿ ಅಧಿಕಾರ ಹೊಂದಿದರೆ ಮಾತ್ರ ಸಾಧ್ಯ. ಪಂಚಾಯತ್‍ಗಳೇ ಪಕ್ಷದ ಅಡಿಪಾಯ ಎಂದು ನಾಪೆÇೀಕ್ಲು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ಅಭಿಪ್ರಾಯಪಟ್ಟರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಅಗಸ್ಟೀನ್ ಜಯರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮದೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಮದೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ದೇವಜನ ಗಣೇಶ್, ಸದಾನಂದ ಬಂಗೇರ, ಸಯ್ಯದ್ ಆಲಿ ಸೇರಿದಂತೆ ವಲಯ ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು ಸಭೆಯಲ್ಲಿ ಭಾಗವಹಿಸಿದ್ದರು.