ಶನಿವಾರಸಂತೆ, ಸೆ. 28: ಸಮೀಪದ ಕೊಡ್ಲಿಪೇಟೆಯ ಮಹಿಳಾ ಸಮಾಜದಲ್ಲಿ ಹೇಮಾವತಿ ರೋಟರಿ ಸಂಸ್ಥೆ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಡಾ. ಉದಯಕುಮಾರ್ ಮಾತನಾಡಿ, ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು.

ದ್ವಿತೀಯ ಪಿಯು ಹಾಗೂ 10ನೇ ತರಗತಿಯಲ್ಲಿ ಅಧಿಕ ಅಂಕ ಗಳಿಸಿದ ಕಿರಿಕೊಡ್ಲಿಮಠ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರಾದ ವಿ.ಆರ್. ಬೃಂದಾ, ವಿ.ಆರ್. ಸುಕನ್ಯಾ, ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ನಿಶಾಂತ್ ಮಂಜು ಹಾಗೂ ನೂರಲ್ ಇಫ್ತಾ ಅವರನ್ನು ಪುರಸ್ಕರಿಸಲಾಯಿತು. ಎಸ್.ಕೆ.ಎಸ್. ಕಲ್ಲುಮಠ ವಿದ್ಯಾಸಂಸ್ಥೆಯ ಶಿಕ್ಷಕಿ ಚಂದ್ರಕಲಾ ಅವರಿಗೆ ಉತ್ತಮ ಶಿಕ್ಷಕಿ ಪುರಸ್ಕಾರ ನೀಡಿ ಗೌರವಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ರೋಟರಿ ಸಂಸ್ಥೆ ಅಧ್ಯಕ್ಷ ಎಚ್.ಎಂ. ದಿವಾಕರ್ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಅಮೃತ್ ಕುಮಾರ್, ನಿರ್ಗಮಿತ ಅಧ್ಯಕ್ಷ ಪ್ರವೀಣ್, ಮುಂದಿನ ಸಾಲಿನ ಅಧ್ಯಕ್ಷ ದಿನೇಶ್, ಸದಸ್ಯರು ಉಪಸ್ಥಿತರಿದ್ದರು.