ಮಡಿಕೇರಿ, ಸೆ. 28: ಬಲ್ಲಮಾವಟಿ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಜಮಾಬಂದಿ ಸಭೆ ಅ. 1ರಂದು ಪೂರ್ವಾಹ್ನ 11 ಗಂಟೆಗೆ ಬಲ್ಲತ್ತನಾಡು ಪಿಂಚಣಿದಾರರ ಸಂಘ ಸಭಾಂಗಣದಲ್ಲಿ ಪಂಚಾಯಿತಿ ಆಡಳಿತಾಧಿಕಾರಿಗಳಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಿ.ಎಸ್. ದಯಾನಂದ್ ಹಾಗೂ ನೋಡಲ್ ಅಧಿಕಾರಿಯಾದ ಜಿ.ಪಂ. ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀಕಂಠಯ್ಯ ಉಪಸ್ಥಿತಿಯಲ್ಲಿ ನಡೆಯಲಿದೆ.