ಸಿದ್ದಾಪುರ, ಸೆ. 28: ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಜಮಾಬಂದಿ ಕಾರ್ಯಕ್ರಮ ಸೋಮವಾರಪೇಟೆ ಕ್ಷೇತ್ರ ಶಿಕ್ಷಣ ಅಧಿಕಾರಿ ಹೆಚ್.ಕೆ ಪಾಂಡು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ನೋಡಲ್ ಅಧಿಕಾರಿ ಡಾ. ಸಂಜೀವ್ ಕುಮಾರ್ ಆರ್. ಸಿಂಧೆ, ಹಾಗೂ ಜಿಲ್ಲಾ ಪಂಚಾಯತ್ ಸದಸ್ಯೆ ಸುನಿತಾ ಮಂಜುನಾಥ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಹೆಚ್.ಎಸ್. ಅನಿಲ್‍ಕುಮಾರ್ ಹಾಗೂ ಗ್ರಾಮಸ್ಥರು ಹಾಜರಿದ್ದರು.