ಸೋಮವಾರಪೇಟೆ, ಸೆ. 28: ಸಮೀಪದ ಹಾನಗಲ್ಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು.

ಗ್ರಾ.ಪಂ. ಮಾಜಿ ಅಧ್ಯಕ್ಷೆ ರೇಣುಕಾ ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ತಾ.ಪಂ. ಸದಸ್ಯೆ ಹೆಚ್.ಎನ್. ತಂಗಮ್ಮ ಅವರು ಭಾಗವಹಿಸಿ ಮಾತನಾಡಿ, ಸರ್ಕಾರದ ವತಿಯಿಂದ ಕೈಗೊಳ್ಳಲಾಗಿರುವ ಪೋಷಣ್ ಅಭಿಯಾನದ ಮಹತ್ವ, ಗರ್ಭಿಣಿ ಸ್ತ್ರೀಯರು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಗ್ರಾ.ಪಂ. ಮಾಜೀ ಅಧ್ಯಕ್ಷೆ ಯಶೋಧ ಉಕ್ರಪ್ಪ, ಅಂಗನವಾಡಿ ಕಾರ್ಯಕರ್ತೆ ಶಾರದ, ಗ್ರಾಮ ವ್ಯಾಪ್ತಿಯ ಗರ್ಭಿಣಿ ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.